ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ 2 ಕೋಟಿ 50 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೇ ಇಬ್ಬರು ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ.
1 ಕೆಜಿ 47 ಗ್ರಾಂ MDMA ಕ್ರಿಸ್ಟಲ್ ಜಪ್ತಿ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರು ವಿದೇಶಿ ಪ್ರಜೆಗಳನ್ನು ಹೆಬ್ಬಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡ್ಯೂರೋ ಮ್ಯೂಚೆಲ್, ಇಬ್ಯು ಸ್ಯಾಮ್ಯೂಯೇಲ್ ಚೆಕುಮೂವ ಬಂಧಿತ ವಿದೇಶಿ ಪ್ರಜೆಗಳು ಎಂದು ತಿಳಿದುಬಂದಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಕೇಸ್ ದಾಖಲಾಗಿದೆ.