ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ಈ ಬಗ್ಗೆ ವಿಷಯ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು.
ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ಎಂಬ ಬಗ್ಗೆ ನಾವು ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು ಕೇಂದ್ರ ಸಚಿವರು.
ಸಮನ್ವಯ ಸಮಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಕೋರ್ ಕಮಿಟಿ ಪುನಾ ರಚನೆ ವಿಚಾರ ಸಂಬಂಧ ಮಾತನಾಡಿ, ಕೋರ್ ಕಮಿಟಿ ಪುನಾ ರಚನೆ ಬಗ್ಗೆ ನಮ್ಮ ಪಕ್ಷದಲ್ಲಿ ಒಂದು ಸಭೆ ಆಗಿದೆ. ಕೋರ್ ಕಮಿಟಿ ಮತ್ತು ಕಾರ್ಪೋರೇಷನ್ ಚುನಾವಣೆ ಸಂಬಂಧ ಪಕ್ಷ ಸಂಘಟನೆಗೆ ಸಮಿತಿ ಮಾಡುವ ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಯದುವೀರ್ ಒಡೆಯರ್ ತಾತ ನಿಧನ: ಸಂಸದರ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆ
ಶಿವಮೊಗ್ಗ: ನಾಳೆಯಿಂದ 2 ದಿನ ಮೆಸ್ಕಾಂ ಆನ್ ಲೈನ್ ಸೇವೆ ಸ್ಥಗಿತ, ವಿದ್ಯುತ್ ಬಿಲ್ ಪಾವತಿಯೂ ಬಂದ್