ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇದೆ. ಕಡ್ಡಾಯ ಕನ್ನಡ ಪರೀಕ್ಷೆ ತೇರ್ಗಡೆಯಾದವರಿಗೆ ಅದನ್ನು ಹೊರತುಪಡಿಸಿ, ಉಳಿದ ಪರೀಕ್ಷೆ ಬರೆಯಬೇಕಿದೆ. ಇದೀಗ ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ಡೌನ್ ಲೋಡ್ ಬಗ್ಗೆ ಕೆಇಎ ಮಹತ್ವದ ಮಾಹಿತಿ ಹಂಚಿಕೊಂಡಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ಅವರು, ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿದ್ದು, ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪ್ರಮಾಣ ಪತ್ರಗಳನ್ನು KEA ವೆಬ್ ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಸದ್ಯದಲ್ಲೇ ಲಿಂಕ್ ಬಿಡುಗಡೆ ಮಾಡಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ. ಅರ್ಹರು, ಉತ್ತೀರ್ಣರಾಗಿರುವ ವಿಷಯವನ್ನು ಅರ್ಜಿಯಲ್ಲಿ ನಮೂದಿಸಿ, ನಿಗದಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಿದ್ದಾರೆ.
#KeaRecruitmentExams: ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿದ್ದು, ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪ್ರಮಾಣ ಪತ್ರಗಳನ್ನು #KEA ವೆಬ್ ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಸದ್ಯದಲ್ಲೇ ಲಿಂಕ್ ಬಿಡುಗಡೆ ಮಾಡಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ. ಅರ್ಹರು,…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 23, 2025
ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ: ಸಂಸದ ತೇಜಸ್ವಿ ಸೂರ್ಯ