ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆಗಳನ್ನು ನವೆಂಬರ್ 08ರಂದು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ 08ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಕಾರ್ಮಿಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸ್ಪರ್ಧೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರದ ಖಾಯಂ ನೌಕರರು ಸಂಘವು ನೀಡಿರುವ https://forms.gle/8pR3m5nXowwQzccs9 ಆನ್ಲೈನ್ ಲಿಂಕ್ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರೂ.1,00,000-00, ದ್ವಿತೀಯ ಬಹುಮಾನ ರೂ.75,000-00, ತೃತೀಯ ಬಹುಮಾನ ರೂ.50,000-00 ಹಾಗೂ ಸಮಾಧಾನಕರ ಬಹುಮಾನ ರೂ.20,000-00 ನಗದು ಬಹುಮಾನ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರಕಟಣೆ ತಿಳಿಸಿದೆ.








