ಹರಿಯಾಣ : ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಒಂದು ದುರಂತದ ಬೆನ್ನಲ್ಲೇ ಹರಿಯಾಣದಲ್ಲಿ ಮತ್ತೊಂದು ಭೀಕರವಾದ ಬಸ್ ಅಪಘಾತ ಸಂಭವಿಸಿದೆ. ಗುರುಗ್ರಾಮದಿಂದ ಬಿಹಾರಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೆ ಈಡಾಗಿದ್ದು, ಈ ಒಂದು ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಕುಶಿ ನಗರದ ಬಳಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಿಟ್ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








