ಮಂಗಳೂರು : ಮಂಗಳೂರಿನಲ್ಲಿ ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಮಂಗಳೂರಿನ ಸೂರತ್ಕಲ್ ನಲ್ಲಿ ದೀಪಕ್ ಬಾರ್ ನಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದ್ದು ಬಾರ್ ನಲ್ಲಿ ಮದ್ಯ ಸೇವಿಸಿ ಹೊರಬರುವಾಗ ಗಲಾಟೆ ನಡೆದಿದೆ.
ಮುಕ್ಷಿದ್ ಹಾಗು ನಿಜಾಮ್ ಎಂಬುವವರಿಗೆ ಚಾಕು ಇರಿಯಲಾಗಿದೆ. ರೌಡಿಶೀಟರ್ ಆದಂತಹ ಗುರುರಾಜ್ ಮತ್ತು ಅಲೆಕ್ಸ್ ಸಂತೋಷ್, ಸುಶಾಂತ್ ಹಾಗೂ ನಿತಿನ್ ಎಂಬುವವರು ಇಬ್ಬರಿಗೆ ಚಾಕು ಇರಿದು ದೃಷ್ಕೃತ್ಯ ಎಸಗಿದ್ದಾರೆ. ಘಟನೆ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಆರೋಪಿಗಳ ಬಂಧನಕ್ಕೆ ನಾಲ್ಕು ತಂಡ ರಚನೆ ಮಾಡಿದ್ದಾರೆ. ಕಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








