ಬೆಂಗಳೂರು: ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಕೆ.ನಾಗಣ್ಣ ಗೌಡ ಅವರನ್ನು ಬಿಡುಗಡೆಗೊಳಿಸಿ ಸರ್ಕಾರವು ಆದೇಶ ಹೊರಡಿಸಿದೆ.
ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕೆ.ನಾಗಣ್ಣ ಗೌಡ ಬಿನ್ ಈರೇಗೌಡ, 3ನೇ ಕ್ರಾಸ್, ವಿವಿ ನಗರ, ಕಲ್ಲಹಳ್ಳಿ, ಮಂಡ್ಯ ಇವರನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ಮಮಇ 9 ಮಭಾಬ 2021 ದಿನಾಂಕ 21/10/2022ರನ್ವಯ ಕೇಂದ್ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧಿನಿಯಮ 2005ರ ಪರಿಚ್ಛೇಧ 18 ರನ್ವಯ ಹಾಗೂ ಕರ್ನಾಟಕ ರಾಜ ಮಕ್ಕಳ ಆಯೋಗದ ನಿಯಮ 2010ರ ನಿಯಮ 3ರಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ದಿನಾಂಕ 21/10/2022ರಿಂದ ಜಾರಿಗೆ ಬರುವಂತೆ 3 ವರ್ಷಗಳ ಅವಧಿಗೆ ನೇಮಕ ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ.
ಪ್ರಸ್ತುತ ಸದರಿ ಅವಧಿಯು ಮುಕ್ತಾಯಗೊಂಡಿರುವುದರಿಂದ ದಿನಾಂಕ 20/10/2025ರಿಂದ ಅನ್ವಯವಾಗುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

BREAKING: ರಾಜ್ಯದಲ್ಲಿ 1,200 ಚ.ಅಡಿ ವಿಸ್ತೀರ್ಣದ ಕಟ್ಟಡಗಳಿಗೆ ‘ಓಸಿ ವಿನಾಯಿತಿ’ ನೀಡಿ ಸರ್ಕಾರ ಅಧಿಕೃತ ಆದೇಶ








