ಬೆಂಗಳೂರು : ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಟೆಕ್ಕಿ ಬಲಿಯಾಗಿದ್ದು, ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಟೆಕ್ಕಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಎಪಿಎಂಸಿ ಬಳಿ ಈ ಒಂದು ಘಟನೆ ಸಂಭವಿಸಿದೆ. ಬೈಕ್ ನಿಂದ ಬಿದ್ದು ಪ್ರಿಯಾಂಕ (26) ಸಾವನಪ್ಪಿದ್ದಾರೆ.
ಸಹೋದರನ ಜೊತೆಗೆ ಬೈಕ್ ನಲ್ಲಿ ತೆರಳುವಾಗ ಈ ಒಂದು ದುರ್ಘಟನೆ ಸಂಭವಿಸಿದೆ. ಹುಸ್ಕೂರು ರಸ್ತೆಯಿಂದ ಮಾದಪುರಕ್ಕೆ ತೆರಳುತ್ತಿದ್ದರು. ಕಾಮಗಾರಿಯಿಂದ ಎಪಿಎಂಸಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿತ್ತು. ಈ ವೇಳೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದಾರೆ. ಕೆಳಗಡೆ ಬಿದ್ದ ಯುವತಿಯ ಮೇಲೆ ಹಿಂದಿನಿಂದ ಬಂದ ಲಾರಿ ಹರಿದಿದೆ. ಕೂಡಲೇ ಪ್ರಿಯಾಂಕಾ ಸ್ಥಳದಲ್ಲಿ ಸಾಬನಪ್ಪಿದ್ದು ಅಪಘಾತದ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








