ಬೆಂಗಳೂರು : ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಬೆಂಗಳೂರಿನ ಕೆಆರ್ ಪುರಂ ತ್ರಿವೇಣಿ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಗ್ಯಾಸ್ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಪಕ್ಕದ ಮನೆಗಳಿಗೂ ಹಾನಿ ಆಗಿದೆ. ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆ ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಓರ್ವ ಸಾವನಪ್ಪಿದ್ದಾನೆ. ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯದಳ ಭೇಟಿ ಕೊಟ್ಟಿದ್ದು ವೈಟ್ ಫೀಲ್ಡ್ ವಿಭಾಗದ ಡೀಸಿಪಿ ಪರಶುರಾಮ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








