ಬೆಂಗಳೂರು : ಬೆಂಗಳೂರಿನಲ್ಲಿ ಲಾಲ್ಬಾಗ್ನಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರವಾಗಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಸಂಸದ ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿ ತೇಜಸ್ವಿ ಸೂರ್ಯ ಒಬ್ಬ ಕಾಲಿ ಟ್ರಂಕ್ ಎಂದು ಕಿಡಿಕಾರಿದ್ದಾರೆ.
ಲಾಲ್ ಬಾಗ್ ಗೆ ಸುರಂಗ ಮಾರ್ಗ ನಿರ್ಮಾಣ ಮಾಡುವುದರಿಂದ ಯಾವುದೇ ರೀತಿಯ ಸಮಸ್ಯೆ ಆಗಲ್ಲ. ತೇಜಸ್ವಿ ಸೂರ್ಯ ಯಾರು? ಎಂಪಿ ಆಗಿ ಪ್ರಧಾನಿ ಹತ್ರ ರೂ.1 ಕೂಡ ಅನುದಾನ ತಂದಿಲ್ಲ. ಆತನೊಬ್ಬ ಖಾಲಿ ಟ್ರಂಕ್ ತೇಜಸ್ವಿ ಸೂರ್ಯ. ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ. ಬಿಜೆಪಿ ಅವಧಿಯಲ್ಲಿ ಯಾವುದೇ ಕೆಲಸ ಆಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.








