ಆಂಧ್ರಪ್ರದೇಶ : ಆಂಧ್ರಪ್ರದೇಶ ಮತ್ತು ಬೆಂಗಳೂರು ನಡುವೆ ಕರ್ನೂಲ್ ನಲ್ಲಿ ಖಾಸಗಿ ಬಸ್ ದುರಂತದಲ್ಲಿ ಇದುವರೆಗೂ 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಸ್ ಚಾಲಕ ಮಿರಿಯಾಲ ಲಕ್ಷ್ಮಯ್ಯನನ್ನು ಅರೆಸ್ಟ್ ಮಾಡಲಾಗಿದೆ.
ಚಾಲಕರನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕ ಅಂಶ ಬಯಲಾಗಿದ್ದು ಚಾಲಕ ಮಿರ್ಯಾಲ ಲಕ್ಷ್ಮಯ್ಯ ಪಲ್ನಾಡ್ ನಗರದ ನಿವಾಸಿಯಾಗಿದ್ದು, ಆತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದ ಎಂದು ತಿಳಿದುಬಂದಿದೆ. ಹತ್ತನೇ ಕ್ಲಾಸ್ ಪಾಸ್ ಆಗಿರೋ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ. ಆರೋಪಿ ಚಾಲಕನನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.








