ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಎಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಗಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆದರು.








