Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ’ ಏಷ್ಯಾದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯಲಿದೆ ; ಫಿಚ್ ರೇಟಿಂಗ್ಸ್

12/02/2026 10:06 PM

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
KARNATAKA

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By kannadanewsnow0925/10/2025 8:52 PM

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಂಬತ್ತು ಎಸ್‌ಎಸ್‌ಎಲ್‌ಸಿ ಟಾಪರ್‌ ವಿದ್ಯಾರ್ಥಿಗಳಿಗೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ನವದೆಹಲಿಗೆ ಐದು ದಿನಗಳ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಿದ್ದಾರೆ.

ತಮ್ಮ ಗೃಹಕಚೇರಿಯಲ್ಲಿ ವಿದ್ಯಾರ್ಥಿಗಳನ್ನು ಭೇಟಿಮಾಡಿ ಅವರ ಅನಿಸಿಕೆಗಳನ್ನು ಆಲಿಸಿ ಎಲ್ಲರಿಗೂ ಪ್ರಯಾಣ ಸುಖಕರವಾಗಿರಲಿ ಎಂದು ಶುಭಹಾರೈಸಿದ್ದಾರೆ.

ವಿದ್ಯಾರ್ಥಿಗಳು ಇಂಡಿಯಾ ಗೇಟ್, ಕಮಲ ಮಂದಿರ, ಕುತುಬ್ ಮಿನಾರ್, ಕೆಂಪುಕೋಟೆ, ಕರ್ತವ್ಯ ಪಥ ಮತ್ತು ಸ್ವಾಮಿನಾರಾಯಣ ಮಂದಿರ ಮುಂತಾದ ರಾಷ್ಟ್ರದ ಪ್ರಮುಖ ಸ್ಮಾರಕಗಳು ಹಾಗೂ ಸಾಂಸ್ಕೃತಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಶಿಕ್ಷಕರೂ ಕೂಡ ಜೊತೆಯಾಗಿ ತೆರಳಲಿದ್ದಾರೆ. ಈ ತಂಡವು ಸೋಮವಾರ ಸಂಜೆ 5-30 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಈ ಶೈಕ್ಷಣಿಕ ಪ್ರವಾಸದ ಉದ್ದೇಶ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಮಹತ್ವಾಕಾಂಕ್ಷೆ ಬೆಳೆಸುವುದಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪ್ರೇರೇಪಿಸಲು ನಾವು ಉದ್ದೇಶಿಸಿದ್ದೇವೆ. ಹೊನ್ನಾಳಿಯ ಇಬ್ಬರು ಅಸಾಧಾರಣ ವಿದ್ಯಾರ್ಥಿಗಳನ್ನು ಸಹ ಸೇರಿಸಿಕೊಂಡು ಒಟ್ಟಾರೆ ಒಂಬತ್ತು ವಿದ್ಯಾರ್ಥಿಗಳನ್ನು ಕಳುಹಿಸಲಾಗುತ್ತಿದೆ. ಪ್ರಯಾಣ, ವಿಮಾನ ದರ ಹಾಗೂ ವಸತಿ ಸೇರಿದಂತೆ ಎಲ್ಲಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸಲಾಗುವುದು ಎಂದರು.

ಈ ಸಾಧನೆ ಮಾಡಿದ ಮಕ್ಕಳನ್ನು ನೋಡುವುದರಿಂದ ಪ್ರಸ್ತುತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬ್ಯಾಚ್‌ಗೆ ಪ್ರೇರಣೆ ಸಿಗುತ್ತದೆ. ಅವರು ಕೂಡ ಶ್ರದ್ಧೆಯಿಂದ ಅಧ್ಯಯನ ಮಾಡಿ ಉತ್ತಮ ಫಲಿತಾಂಶ ಗಳಿಸಲು ಪ್ರೋತ್ಸಾಹಿತರಾಗುತ್ತಾರೆ ಆದ್ದರಿಂದ ಈ ಪ್ರವಾಸ ಏರ್ಪಡಿಸಲಾಗಿದೆ ಎಂದರು.

ಈ ವೇಳೆ ವಿದ್ಯಾರ್ಥಿಗಳಾದ ಪಿ. ಮಂಜುನಾಥ್, ಧನುಷ್ ಬಿ.ಎನ್, ಪವನ್ ಕುಮಾರ್ ಕೆ.ಪಿ, ಜೇಷ್ಟಾ ಬಿ., ಅಮೃತಾ ಟಿ.ಎಂ., ಮಿಜ್ಬಾ ನಾಜ್, ಉಷಾ ಹೆಚ್., ಲತಾ ಹೆಚ್.ಎ. ಮತ್ತು ಯೋಗೇಶ್ವರಿ ಜೆ.ಬಿ ಅವರೊಂದಿಗೆ ಶಿಕ್ಷಕರಾದ ಬಿ. ಅರುಣ್ ಕುಮಾರ್ ಮತ್ತು ಕೆ.ಎಂ. ನಿಂಗಮ್ಮ ತೆರಳಲಿದ್ದಾರೆ.ಈ‌ ಪ್ರವಾಸ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದತ್ತ ಒಂದು ಪ್ರೇರಣಾದಾಯಕ ಹೆಜ್ಜೆಯಾಗಿದೆ.

ಸಂಸದರಿಗೆ ಧನ್ಯವಾದ ಹೇಳಿದ ವಿದ್ಯಾರ್ಥಿಗಳು

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ದೆಹಲಿ ಶೈಕ್ಷಣಿಕ ಪ್ರವಾಸದ ವ್ಯವಸ್ಥೆ ಮಾಡಿದ ವಿಚಾರ ತಿಳಿದ ಕ್ಷಣವೇ ವಿದ್ಯಾರ್ಥಿಗಳು ಸಂತೋಷ‌ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳು ಸಂಸದರನ್ನು ಭೇಟಿ ಮಾಡಿ, ಅವರೊಂದಿಗೆ ಮಾತುಕತೆ ನಡೆಸಿ, ತಮ್ಮ ಧನ್ಯವಾದಗಳನ್ನು ಸಲ್ಲಿಸಿದ್ದು ವಿಶೇಷವಾಗಿತ್ತು.

BREAKING: ಬೆಂಗಳೂರಲ್ಲಿ BMTC ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿ

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ರಾಜ್ಯದ ‘ಗ್ರಾಮ ಪಂಚಾಯ್ತಿ’ಗಳಲ್ಲಿ ಈ ಎಲ್ಲಾ ‘ಸೇವೆ’ಗಳು ಲಭ್ಯ

ವಾಟ್ಸಾಪ್ ಹೊಸ ವೈಶಿಷ್ಟ್ಯ ; ರಿಪ್ಲೈ ಮಾಡದ ಬಳಕೆದಾರರಿಗೆ ಸಂದೇಶ ಕಳುಹಿಸುವ ಮಿತಿ ಪರಿಚಯ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM1 Min Read

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM3 Mins Read

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM1 Min Read
Recent News

‘ಭಾರತ’ ಏಷ್ಯಾದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಉಳಿಯಲಿದೆ ; ಫಿಚ್ ರೇಟಿಂಗ್ಸ್

12/02/2026 10:06 PM

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM
State News
KARNATAKA

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow0912/02/2026 9:47 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ…

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM

BIG BREAKING: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘IPL ಪಂದ್ಯ’ಗಳನ್ನಾಡಿಸಲು ಸರ್ಕಾರ ಗ್ರೀನ್ ಸಿಗ್ನಲ್

12/02/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.