ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸಿದ್ದು, ಇದೀಗ ಮಾಜಿ ಸಚಿವ ಕೆ.ಎನ್ ರಾಜಣ್ಣ ಸಿಎಂ ಬದಲಾವಣೆ ಕುರಿತು ಸ್ಪೋಟಕ ಹೇಳಿಕೆ ಒಂದನ್ನು ನೀಡಿದ್ದು, ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಪುಟ ಪುನಾರಚನೆ ಮೇಲೆ ಬದಲಾವಣೆ ಭವಿಷ್ಯ ನಿರ್ಧಾರವಾಗಲಿದೆ. ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ. ಬಿಹಾರ್ ಚುನಾವಣೆ ಬಳಿಕ ಬದಲಾವಣೆ ಆಗುತ್ತೆ ಎಂದು ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.








