ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆನೇಕಲ್ ತಾಲೂಕಿನ ಸಿದ್ದಯ್ಯನ ದೊಡ್ಡಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿದ್ದಯ್ಯನ ದೊಡ್ಡಿಯಲ್ಲಿ ಕಂಟೇನರ್ ಪಲ್ಟಿಯಾಗಿ ಇಬ್ಬರು ಸಾವನಪ್ಪಿದ್ದಾರೆ.
ಅಪಘಾತದಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಇಳಿಜಾರು ರಸ್ತೆಯ ಪಕ್ಕದ ಕಂದಕಕ್ಕೆ ಕಂಟೇನರ್ ಉರುಳಿ ಬಿದ್ದಿದೆ. ಕಂಟೇನರ್ ಕೆಳಗೆ ಇಬ್ಬರ ಮೃತ ದೇಹಗಳು ಸಿಲುಕಿಕೊಂಡಿವೆ. ಇನ್ನು ಘಟನೆಯಲ್ಲಿ ಕಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








