ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಓವರ್ ಟೇಕ್ ವೇಳೆ ಕಾರಿಗೆ ಮತ್ತೊಂದು l ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟಡ್ ಮಧುವನಹಳ್ಳಿ ಬೈಪಾಸ್ ಔಟರ್ ರಿಂಗ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆಯ ಕೊಳೆಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ಐ 10 ಕಾರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾಂತರಾಜ್, ಸೋಮಣ್ಣ, ಮೂರ್ತಿ, ಖುಷಿ ಹಾಗೂ ಸ್ವಾತಿಗೆ ಗಂಭೀರವಾದ ಗಾಯಗಳಾಗಿದ್ದು ಗಾಯಾಳುಗಳಿಗೆ ಕೊಳ್ಳೇಗಾಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಗುದ್ದಿಸಿ ಪರಾರಿಯಾದ ಚಾಲಕನಿಗೆ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.






