ಶಿವಮೊಗ್ಗ: ರಾಜ್ಯದಲ್ಲಿ ಅನೇಕರ ಬಿಪಿಎಲ್ ಕಾರ್ಡ್ ಗಳು ರದ್ದಾಗಿವೆ. ಏನು ಮಾಡಬೇಕು ಎಂಬ ಚಿಂತೆಯಲ್ಲಿ ಅವರೆಲ್ಲ ಇದ್ದಾರೆ. ಇಂತಹ ಜನರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ. ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದಾಗಲಿವೆ. ಅನರ್ಹರ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂಬುದಾಗಿ ತಿಳಿಸಿದರು.
ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ದಾರರರಷ್ಟೇ ರದ್ದು ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ಯಾನ್ಸಲ್ ಮಾಡಲಾಗಿದೆ. ಯಾವುದೇ ಫಲಾನುಭವಿಗಳಿಗೂ ಮೋಸವಾಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ, ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ ಎಂದರು.
ಹೊಸ ಡೇಟಿಂಗ್ ಪ್ರವೃತ್ತಿಯಾದ ‘ಬಯೋ-ಬೈಟಿಂಗ್’ ಎಂದರೇನು? | What Is Bio-Baiting?
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ, ಬಿವೈ ವಿಜಯೇಂದ್ರ ಅವರು ಸಿಎಂ ಆಗಲ್ಲ: ಶಾಸಕ ಯತ್ನಾಳ್








