ಬೆಂಗಳೂರು : ಡಿಜೆ ಹಳ್ಳಿ ಇನ್ಸ್ಪೆಕ್ಟರ್ ಸುನಿಲ್ ವಿರುದ್ಧ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ನನ್ನು ಸಸ್ಪೆಂಡ್ ಮಾಡಲಾಗಿದೆ ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು ಇನ್ಸ್ಪೆಕ್ಟರ್ ಹಾಗೂ ಎ ಎಸ್ ಐ ವಿರುದ್ಧ ಪ್ರಕರಣ ದಾಖಲಾಗಿದ್ದು ಮಾಡಲಾಗಿದೆ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಹೇಳಿಕೆ ನೀಡಿದರು.
ಕಳೆದ ಕೆಲವು ದಿನಗಳ ಹಿಂದೆ ಸಂತ್ರಸ್ತ ಮಹಿಳೆ ಡಿಜಿ ಕಚೇರಿಗೆ ದೂರು ನೀಡಿದ್ದರು. ಕಳೆದ ಒಂದು ವರ್ಷದಿಂದ ಮನೆ ಹಾಗೂ ಹೋಟೆಲ್ಗೆ ಕರೆಸಿಕೊಂಡು ಇನ್ಸ್ಪೆಕ್ಟರ್ ಸುನಿಲ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ ಬ್ಯೂಟಿ ಪಾರ್ಲರ್ ಹಾಕಿ ಬಿಸಿನೆಸ್ ಮಾಡಲು ಹಣ ಕೊಡುತ್ತೇನೆ ಎಂದು ಹೇಳಿ ನನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸೆಗಿದ್ದಾರೆ. ಖಾಸಗಿ ಫೋಟೋ ಮತ್ತು ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ದೂರು ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಇದೀಗ ಸೀಮಂತ್ ಕುಮಾರ್ ಅವರು ಇನ್ಸ್ಪೆಕ್ಟರ್ ಸುನಿಲ್ ಹಾಗೂ ಎ ಎಸ್ ಐ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.








