Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : `ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ’ ಪರಿಷ್ಕರಣೆ : ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ
KARNATAKA

ಗಮನಿಸಿ : `ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ’ ಪರಿಷ್ಕರಣೆ : ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By kannadanewsnow57

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಬೇಕಾಗಿರುವುದರಿಂದ ಅರ್ಹರಿಂದ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.

ಅರ್ಹತಾ ದಿನಾಂಕ 01.11.2025 ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದಪಡಿಸುವಿಕೆಗೆ ವೇಳಾಪಟ್ಟಿ:

06.11.2025 (ಗುರುವಾರ) ರಂದು ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನ.

25.11.2025 (ಮಂಗಳವಾರ) ರಂದು ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನ.

25.11.2025 (ಮಂಗಳವಾರ) ರಿಂದ 10.12.2025 (ಬುಧವಾರ) ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗಧಿಪಡಿಸಿದ ಅವಧಿ.

30.12.2025 (ಮಂಗಳವಾರ) ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವ ದಿನ.

ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿದೆ. ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು, ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ ಹಾಗೂ ಬಳ್ಳಾರಿ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿದೆ.

ಹೆಸರು ನೋಂದಾಯಿಸಲು ಮಾರ್ಗಸೂಚಿ:

ಭಾರತದ ಪ್ರಜೆಯಾಗಿರುವ, ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025 ಕ್ಕೆ ಮೊದಲ 6 ವಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.

ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾರೆಯಾಗಿ ಸಲ್ಲಿಸಿದ (ಬಲ್ಕ್) ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಯು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸತಕ್ಕದ್ದಲ್ಲ. ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯವರ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಮತದಾರರ ನೋಂದಣಾಧಿಕಾರಿಗಳಿಗೆ ಕಳುಹಿಸಬಹುದು.

ಒಂದೇ ಕುಟಂಬದ ಎಲ್ಲಾ ಸದಸ್ಯರು ನಮೂನೆ 19 ರಲ್ಲಿ ಅರ್ಜಿಗಳನ್ನು ಕುಟುಂಬ ಯಾವುದಾದರೂ ಒಬ್ಬ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಿ, ಪ್ರಮಾಣ ಪತ್ರವನ್ನು ಪರಿಶೀಲಿಸಿಕೊಳ್ಳತಕ್ಕದ್ದು.

ಅರ್ಜಿದಾರರು ನಮೂನೆ-19 ರ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ಬಿಳಿ ಬಣ್ಣದ ಹಿನ್ನೆಲೆ ಹೊಂದಿದ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸತಕ್ಕದ್ದು.

ಅರ್ಜಿದಾರರು ನಮೂನೆ-19 ರೊಂದಿಗೆ ಲಗತ್ತಿಸಿದ ಆಧಾರ್ ಕಾರ್ಡ್‌ನ ಗೌಪ್ಯತೆಯನ್ನು ಕಾಪಾಡುವ ದೃಷ್ಟಿಕೋನದಿಂದ ಆಧಾರ್ ಸಂಖ್ಯೆಯ ಪ್ರಥಮ 8 ಸಂಖ್ಯೆಗಳನ್ನು ಮಾಸ್ಕ್ ಮಾಡಲು ಹಾಗೂ ಅರ್ಜಿದಾರರ ಖಾಸಗಿತ್ವದ ದಾಖಲೆ ಹಾಗೂ ಮೊಬೈಲ್ ಸಂಖ್ಯೆಯನ್ನು ಯಾರಿಗೂ ನೀಡಬಾರದೆಂದು ಕಡ್ಡಾಯವಾಗಿ ಸೂಚಿಸಲಾಗಿದೆ.

ಅರ್ಜಿಯಲ್ಲಿನ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾಪ್ರಾತಿನಿಧ್ಯ ಅಧಿನಿಯಮ 1950 ರ 31 ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ನೇ ನವೆಂಬರ್ 2025 ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಠ 3 ವರ್ಷ ಭೋದನಾ ವೃತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ 2 ರಲ್ಲಿ ಸಂಬಳ ಬಟವಾಡೆ ಅಧಿಕಾರಿಯಿಂದ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.

ಅರ್ಹ ಮತದಾರರು ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ನೋಂದಾಯಿಸಕೂಡಬಾರದು. ಅವರು ಸಾಮಾನ್ಯ ನಿವಾಸಿಯಾಗಿ ವಾಸಿಸುತ್ತಿರುವ ಸ್ಥಳೀಯ ಕ್ಷೇತ್ರದಲ್ಲಿ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಬೇಕು.

ಈ ಕ್ಷೇತ್ರ ವ್ಯಾಪ್ತಿಯ ಹೊರಗಡೆ ಸೆಕೆಂಡರಿ ಶಿಕ್ಷಣ ಸಂಸ್ಥೆಗಳಿಗಿಂತಲೂ ಕಡಿಮೆ ಇಲ್ಲದ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ಮತದಾರರನಾಗಲು ಆಯೋಗದ ಮಾರ್ಗಸೂಚಿಗಳನ್ನು ಪೂರೈಸಿ ಅವರು ಈ ಚುನಾವಣಾ ಕ್ಷೇತ್ರ ವ್ಯಾಪ್ತಿಯ ಸಾಮಾನ್ಯ ನಿವಾಸಿಯಾಗಿ ಇದಕ್ಕೆ ಪೂರಕವಾಗಿರುವಂತಹ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಗಾಗಿ ಅರ್ಹರಿರುತ್ತಾರೆ.

ಆಯೋಗವು ಮುಂಬರುವ ದಿನಗಳಲ್ಲಿ ಸದರಿ ನಮೂನೆ 19 ರ ಅರ್ಜಿಗಳನ್ನು ERMS ನಲ್ಲಿ ಅಳವಡಿಸಲು ಉದ್ದೇಶಿಸಿದೆ. ಕರ್ನಾಟಕ ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರ್ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸಬಹುದು.

ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Note: Revision of the `North East Teachers' Constituency Voter List': Applications invited for registration
Share. Facebook Twitter LinkedIn WhatsApp Email

Related Posts

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

2 Mins Read

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

1 Min Read

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

2 Mins Read
Recent News

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

​ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ: ಇರಾಕ್ ಮೂಲಕ ಸಾಗಲಿದೆ ಇತಿಹಾಸದ ಅತಿ ದೊಡ್ಡ ಶೋಕಯಾತ್ರೆ!

State News
KARNATAKA

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಹಿರಿಯ ಮುಖಂಡರು, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ದಕ್ಷ ಕಾರ್ಯವೈಖರಿ ಮತ್ತು ಜನಸ್ನೇಹಿ…

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.