Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಧರ್ಮಸ್ಥಳದ ಕೇಸ್: ಅಂತಿಮ ವರದಿ ಸಲ್ಲಿಸುವಂತೆ ‘SIT’ಗೆ ಗೃಹ ಸಚಿವ ಪರಮೇಶ್ವರ್ ಸೂಚನೆ
KARNATAKA

BIG NEWS: ಧರ್ಮಸ್ಥಳದ ಕೇಸ್: ಅಂತಿಮ ವರದಿ ಸಲ್ಲಿಸುವಂತೆ ‘SIT’ಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು :- ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ವರದಿ ಕೊಡುವುದಾಗಿ ಎಸ್‌ಐಟಿಯವರು ಹೇಳಿದ್ದರು. 31ರೊಳಗೆ ಕೊಡಬಹುದು ಅಥವಾ ಒಂದೆರಡು ದಿನ ವಿಳಂಬವಾಗಬಹುದು. ಅಂತಿಮ ವರದಿಯನ್ನು ಕೊಡುವಂತೆ ಹೇಳಿದ್ದೇವೆ. ಪತ್ತೆಯಾಗಿರುವ ಮೂಳೆಗಳ ಎಫ್‌ಎಸ್‌ಎಲ್ ವರದಿ, ಕೆಮಿಕಲ್ ರಿಪೋರ್ಟ್ಸ್ ವಿಶ್ಲೇಷಣೆ ಮಾಡಿ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನ ನಾವು ಹೇಳಲು ಬರುವುದಿಲ್ಲ. ಅವರು ಏನು ತೀರ್ಮಾನ ಮಾಡುತ್ತಾರೆ ಕಾದು ನೋಡೋಣ. ದಿನನಿತ್ಯ ಮಾಧ್ಯಮದಲ್ಲಿ ಹೇಳಿಕೆ ಕೊಡಬಹುದು ಅಷ್ಟೇ. ಇಲ್ಲಿವರೆಗೆ ಹೈಕಮಾಂಡ್‌ನವರು ಏನಾದರು ಹೇಳಿದ್ದಾರೆಯೇ? ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಮಾಡುತ್ತೇವೆ ಎಂಬುದರ ಬಗ್ಗೆ ಹೈಕಮಾಂಡ್‌ನಿಂದ ಯಾವುದೇ ಮಾಹಿತಿ ಇಲ್ಲ. ಏನಾದರು ಹೈಕಮಾಂಡ್‌ನಿಂದ ಸೂಚನೆ ಬಂದಿದ್ದರೆ ನಾವು ಪ್ರತಿಕ್ರಿಯಿಸಬಹುದು. ಹೈಕಮಾಂಡ್ ತಿಳಿಸುವವರೆಗೂ ಯಾವುದಕ್ಕು ಮಹತ್ವ ಇರುವುದಿಲ್ಲ ಎಂದರು.

ಅಧಿಕಾರ ಹಂಚಿಕೆ, ಎರಡೂವರೆ ವರ್ಷ ಅಂತ ಚರ್ಚೆ ಆಯ್ತು. ಈಗ ಸಂಪುಟ ಪುನರ್ ರಚನೆ ಎನ್ನುತ್ತಿದ್ದಾರೆ. ಲೀಡರ್‌ಶಿಪ್ ಬದಲಾವಣೆ ಅಂತಾಯ್ತು. ದಿನನಿತ್ಯ ಈ ರೀತಿ ಗೊಂದಲಗಳಾಗುತ್ತಿದ್ದರೆ ಆಡಳಿತದ ಮೇಲೆ ಪರಿಣಾಮ ಬೀರುವುದಿಲ್ಲವೆ? ಆಡಳಿತ ಚೆನ್ನಾಗಿ ಆಗಬೇಕು ಅಂತಂದರೆ ಇದೆಲ್ಲ ನಿಲ್ಲಬೇಕು. ನೆರೆ ಹಾವಳಿ, ರಸ್ತೆ ಗುಂಡಿ ಬಿದ್ದಿದೆ ಈತರ ಮಾತುಗಳನ್ನು ನಿಲ್ಲಿಸಲು ಆಡಳಿತ ಚುರುಕುಗೊಳಿಸಬೇಕು. ಈ ಒಂದು ಗೊಂದಲದಲ್ಲಿ ನಾವು ಇರುವುದು ಸರಿಯಲ್ಲ ಎಂದು ಹೇಳಿದರು.

ನವೆಂಬರ್ 1ರಂದು ಮುಖ್ಯಮಂತ್ರಿಗಳು ಸಂತೋಷಕೂಟ ಏರ್ಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ. ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಊಟ ಹಾಕಿಸಿದರೆ, ರಾಜಕೀಯ ದೊಡ್ಡ ಬೆಳವಣಿಗೆ ಎನ್ನಬೇಕಿಲ್ಲ. ಇದಕ್ಕೆ ರಾಜಕೀಯವಾಗಿ ವಿಶ್ಲೆಷಣೆ ಮಾಡುವುದು ಸರಿಯಲ್ಲ. ಸಂಪುಟ ಪುನರ್ ರಚನೆ ಮಾಡುವ ಕುರಿತು ಹೈಕಮಾಂಡ್‌ನವರು ಈವರೆಗೆ ಯಾರು ಹೇಳಿಲ್ಲ. ಈ ಬಗ್ಗೆ ಮುನ್ಸೂಚನೆಯೂ ಇಲ್ಲ ಎಂದು ಹೇಳಿದರು.

ಸಚಿವ ಮುನಿಯಪ್ಪ ಅವರು ಸಿಎಂ ಆಗಲಿ ಎಂದು ಶಿವಮೊಗ್ಗದಲ್ಲಿ ಘೋಷಣೆ ಕೂಗಿರುವ ಬಗ್ಗೆ ಪ್ರತಿಕ್ರಿಯಿಸಿ, ಕೆ.ಹೆಚ್.ಮುನಿಯಪ್ಪ ಅವರು ಏಳು ಬಾರಿ ಎಂಸಂಸದರಾಗಿದ್ದವರು.‌ ಇದು ಸಾಮಾನ್ಯವಲ್ಲ. ಪಕ್ಷದಲ್ಲಿ ಹಿರಿಯರು, ಕೇಂದ್ರದಲ್ಲಿ ಸಚಿವರಾಗಿದ್ದರು. ಈಗ ರಾಜ್ಯದಲ್ಲಿ ಸಚಿವರಾಗಿದ್ದಾರೆ. ಅವರು ಸಮರ್ಥರಿದ್ದು, ಅರ್ಹತೆಯೂ ಇದೆ. ಮುನಿಯಪ್ಪನವರು ಸಿಎಂ ಆದರೆ ನಾನು ಸಂತೋಷ ಪಡುವವನೆ.

ನಾವೆಲ್ಲ ಒಂದು ವರ್ಗಕ್ಕೆ ಸೇರಿದ್ದೇವೆ. ಆ ವರ್ಗಕ್ಕೆ ಅವಕಾಶ ಸಿಕ್ಕಿತಲ್ಲ ಎಂಬುದು ಸಂತೋಷ ಆಗುತ್ತದೆ. ಯಾವ ವರ್ಗ ತುಳಿತಕ್ಕೆ ಒಳಗಾಗಿತ್ತು, ಆ ವರ್ಗಕ್ಕೆ ಆಡಳಿತ ವರ್ಗ ಆಗುತ್ತದೆ ಅಂದರೆ ಸಂತೋಷ‌ಪಡಲು ಆಗುವುದಿಲ್ಲವೇ ಎಂದರು.

ದಲಿತ ಸಿಎಂ ಸ್ಥಾನ ಈ ಸಲ ಸಿಗಬೇಕು ಎಂಬ ವಿಶ್ವಾಸ ಏನಾದರು ಇದೇಯೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದಲ್ಲಿ ತೀರ್ಮಾನ ಮಾಡುವವರು ಯಾರು? ನಾವು ಇಲ್ಲಿ ಕುಳಿತುಕೊಂಡು ನಾಲ್ಕು ಜನ ಹೇಳಿದರೆ ಆಗುವುದಿಲ್ಲ. ಹೈಕಮಾಂಡ್‌ನವರು ವಿಶ್ಲೇಷಣೆ ಮಾಡುತ್ತಾರೆ. ಬಿಹಾರದಲ್ಲಿ ಎಲೆಕ್ಷನ್ ನಡೆಯುತ್ತಿದೆ. ತದನಂತರ ಇದಕ್ಕೆ ಅವಶ್ಯಕತೆ ಇದ್ದರೆ ಅವರೇ ಮಾಡುತ್ತಾರೆ ಎಂದು ಹೇಳಿದರು.

ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

Share. Facebook Twitter LinkedIn WhatsApp Email

Related Posts

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

1 Min Read

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

2 Mins Read

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

1 Min Read
Recent News

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

State News
KARNATAKA

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಯುವ ನ್ಯಾಯವಾದಿ ಶ್ರಾವ್ಯ ಸಾಗರ್ ಅವರು ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ಪ್ರತಿಷ್ಠಿತ ಜೀವವೈವಿಧ್ಯ ಪ್ರಶಸ್ತಿ ಲಭಿಸಿದೆ.…

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.