ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಎರಡು ವರ್ಷದ ಮಗುವೊಂದು ರಸ್ತೆಯಲ್ಲಿ ಆಟವಾಡುತ್ತಿರುವಾಗ ವೇಗವಾಗಿ ಬಂದಂತಹ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ, ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಸಾವನ್ನಪ್ಪಿದೆ. ಶಿವಮೊಗ್ಗ ಹೊರವಲಯದ ವೀರೂಪಿನ ಕೊಪ್ಪದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಕಾರು ಡಿಕ್ಕಿಯಿಂದ ತೀವ್ರವಾಗಿ ಗಾಯಗೊಂಡಿದ್ದ ವಿನಯ್ (2) ಇದೀಗ ದುರ್ಮರಣ ಹೊಂದಿದ್ದಾನೆ. ಅಪಘಾತವಾದ ತಕ್ಷಣ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.








