ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್ ಸ್ಟೇಬಲ್‌ಗಳು ಇಂದಿನಿಂದ ತೆಲಂಗಾಣ ಮಾದರಿಯ ಹೊಸ ‘ಪಿ ಕ್ಯಾಪ್’ ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಚೋಚ್ ಕ್ಯಾಪ್‌ಗೆ ಪೊಲೀಸ್ ಇಲಾಖೆ ಅಂತಿಮ ವಿದಾಯ ಹೇಳಲಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್‌ನ ಮಧ್ಯೆಯಲ್ಲಿ ಅಚ್ಚೊತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಎಎಸ್‌ಐ, ಪಿಎಸ್‌ಐ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಮೇಲಧಿಕಾರಿಗಳು ಈ ಹಿಂದಿನಂತೆಯೇ ಖಾಕಿ ಬಣ್ಣದ ಕ್ಯಾಪ್ ಧರಿಸಲಿದ್ದಾರೆ.








