ಉತ್ತರಕನ್ನಡ : ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಕೆಯ ಕಾರವಾರ ತಾಲೂಕಿನ ಮಾದಾಳಿ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ.
ಗೋವಾದಿಂದ 1 ಕೋಟಿ ರೂಪಾಯಿ ಹಣವನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಕಲ್ಮೇಶಕುಮಾರ್, ಬೊಂಬ್ರಾರಾಮ್ ಎಂಬುವವರ ಬ್ಯಾಗಿನಲ್ಲಿ ಹಣ ಪತ್ತೆಯಾಗಿದೆ. ಪೊಲೀಸರು ಖಾಸಗಿ ಬಸ್ ತಪಾಸಣೆ ನಡೆಸಿದ್ದಾರೆ ಒಂದು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ನಿನ್ನೆ ರಾತ್ರಿ 9:30 ಕ್ಕೆ ಪೊಲೀಸರು ಹಣ ವಶ ಪಡೆದು ತನಿಖೆ ನಡೆಸುತ್ತಿದ್ದಾರೆ.








