ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಕಳೆದ ತಿಂಗಳು ಜೀವಾವಧಿ ಶಿಕ್ಷೆ ಪ್ರಕಟಿಸಿ ಐತಿಹಾಸಿಕ ತೀರ್ಪು ನೀಡಿತ್ತು.
ಇದೀಗ ಜೀವಿತಾವಧಿ ಸೆರೆವಾಸ ಶಿಕ್ಷೆ ಪ್ರಶ್ನಿಸಿ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಭಾಗೀಯದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂತ್ರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ನೀಡಿತು. ಬಳಿಕ ವಿಚಾರಣೆಯನ್ನು ನವೆಂಬರ್ 13ರ ಮಧ್ಯಾಹ್ನ 2:30ಕ್ಕೆ ನಿಗದಿಪಡಿಸಿತು.








