ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳೆಯರು & ಮಕ್ಕಳ ಕಾವಲು ಸಮಿತಿ ರಚಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆವಹಿಸಬೇಕಿದ್ದು ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳೂ ಕೂಡ ಮಹಿಳೆಯರು ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಹಾಗೂ ಶಿಕ್ಷಣ ಕಾರ್ಯಪಡೆ ರಚಿಸಿ ನಿಯಮಿತವಾಗಿ ಸಭೆ ನಡೆಸಿ ಮಕ್ಕಳ ಹಕ್ಕುಗಳ ರಕ್ಷಣೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ, ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗಿರುವ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಹಾಗೂ ಶಿಕ್ಷಣ ಕಾರ್ಯಪಡೆ ಸಮಿತಿಗಳ ನಿಯಮಿತವಾಗಿ ಸಭೆ ನಡೆಸುವಂತೆ ಕ್ರಮಕೈಗೊಳ್ಳಲು ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.









