ಬೆಂಗಳೂರು: ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಬಳಕೆಯಾಗಿರುವ ವಿದ್ಯುತ್ ಮತ್ತು ನೀರಿನ ಬಿಲ್ ಪಾವತಿಗಾಗಿ ರಾಜ್ಯ ಸರ್ಕಾರವು 15 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಮೇಲೆ ಓದಲಾದ ಕ್ರಮಾಂಕ (1) ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಯಲ್ಲಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (2) ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿರುವ 2024-25ನೇ ಸಾಲಿನ ಆಯವ್ಯಯದ ಭಾಷಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ 102 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ.
“ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳಿಗೆ ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ.”
ಮೇಲೆ ಓದಲಾದ ಕ್ರಮಾಂಕ (3) ರಲ್ಲಿ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1234 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ರೂ.29.19 ಕೋಟಿ ಅಂದಾಜು ಮೊತ್ತದಲ್ಲಿ (ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರೂ.25.85 ಕೋಟಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರೂ.3.34 ಕೋಟಿ) ಲೆಕ್ಕಶೀರ್ಷಿಕೆ 2202-01-053-0-02 ಶಾಲಾ ಕಟ್ಟಡಗಳ ನಿರ್ವಹಣೆ ಉಪಶೀರ್ಷಿಕೆ 058 ವಿದ್ಯುತ್ ಮತ್ತು ನೀರಿನ ವೆಚ್ಚದಡಿಯಲ್ಲಿ ಈ ಉದ್ದೇಶಕ್ಕಾಗಿ ರೂ.10.00 ಕೋಟಿಗಳನ್ನು ಒದಗಿಸಲಾಗಿರುತ್ತದೆ. ಲಭ್ಯವಿರುವ ಅನುದಾನದಲ್ಲಿ ಸಂಬಂಧಿಸಿದ ಇಲಾಖೆ/ನಿಗಮ/ಮಂಡಳಿಗಳಿಗೆ ನೇರವಾಗಿ ಭರಿಸುವ ಮೂಲಕ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.
ಮೇಲೆ ಓದಲಾದ ಕ್ರಮಾಂಕ (4) ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯುತ್ ಮತ್ತು ನೀರಿನ ವೆಚ್ಚಕ್ಕಾಗಿ ರೂ.1500.00 ಲಕ್ಷಗಳ ಅನುದಾನ ಒದಗಿಸಲಾಗಿದ್ದು, ಬೇಡಿಕೆಗೆ ಅನುಗುಣವಾಗಿ ಸದರಿ ಮೊತ್ತವನ್ನು ಸಂಬಂಧಿಸಿದ ವಿದ್ಯುತ್/ನೀರು ಸರಬರಾಜು ಸಂಸ್ಥೆಗಳಿಗೆ ನೇರವಾಗಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆಯಿಂದ ನಿಯಮಾನುಸಾರ ಪಾವತಿಸುವುದು ಎಂದು ಆದೇಶಿಸಿದೆ.
ಮೇಲೆ ಓದಲಾದ ಕ್ರಮಾಂಕ (5) ರಲ್ಲಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು 2024-25ನೇ ಸಾಲಿನ ವಿದ್ಯುತ್ ಬಿಲ್ಲುಗಳನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ಒದಗಿಸಿರುವ ಅನುದಾನದಲ್ಲಿ ಪಾವತಿ ಮಾಡುವುದರ ಬಗ್ಗೆ ಸ್ಪಷ್ಟ ನಿರ್ದೇಶನವಿಲ್ಲದ ಕಾರಣ ಪ್ರಸ್ತುತ ಈ ಕಛೇರಿಗೆ ಸಂಬಂಧಪಟ್ಟ ಎಸ್ಕಾಂ ಮುಖ್ಯ ಕಛೇರಿಗಳಿಂದ ಸ್ವೀಕೃತಿಯಾಗಿರುವ ಮಾಹಿತಿಯಂತೆ 2024-25ನೇ ಸಾಲಿನಲ್ಲಿ ఒట్టు 0.1026.83 ಲಕ್ಷಗಳ ವಿದ್ಯುತ್ బిలా ಪಾವತಿ ಬಾಕಿ ಇರುತ್ತದೆ. ಆದ್ದರಿಂದ ಅನುಬಂಧ-01 ರಲ್ಲಿರುವಂತೆ 2024-25ನೇ ಸಾಲಿನ ವಿದ್ಯುತ್ ಬಿಲ್ಗಳನ್ನು ಸಂಬಂಧಪಟ್ಟ ಎಸ್ಕಾಂಗಳಿಗೆ 2025-26ನೇ ಸಾಲಿನ ಆಯವ್ಯಯದಲ್ಲಿ ಒದಗಿಸಿರುವ ಅನುದಾನದಲ್ಲಿ ನೇರವಾಗಿ ಪಾವತಿಸುವ ಸಂಬಂಧ ಸರ್ಕಾರದ ಅನುಮೋದನೆ ಕೋರಿ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಸಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಇಪಿ 09 ಎಂಸಿಡಿ 2024, ಬೆಂಗಳೂರು ದಿನಾಂಕ:27.10.2025
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25ನೇ ಸಾಲಿನ ಒಟ್ಟು ರೂ.1026.83 ಲಕ್ಷಗಳ ಬಾಕಿ ವಿದ್ಯುತ್ ಬಿಲ್ ಮೊತ್ತವನ್ನು 2025-2026 ಸಾಲಿನಲ್ಲಿ ಆಯವ್ಯಯ : 2202-01-053-0-02- Maintenance of School Buildings : 058-Electricity and Water Charges ರಡಿ ನಿಗದಿಪಡಿಸಿರುವ ರೂ.1500.00 ಲಕ್ಷಗಳ ಅನುದಾನದಿಂದ ಪಾವತಿಸಲು ಆದೇಶಿಸಿದೆ.









