ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ನಾಲ್ಕು ಚಿರತೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಬಳಿ ನಾಲ್ಕು ಚಿರತೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಅತಂಕ ಶುರುವಾಗಿದೆ.
ತಡರಾತ್ರಿ ಚಕ್ರಬಾವಿ ಗ್ರಾಮದ ಸಮೀಪ ನಾಲ್ಕು ಚಿರತೆಗಳು ಕಾಣಿಸಿಕೊಂಡಿವೆ. ಯುವಕರು ಕಾರಿನಲ್ಲಿ ತೆರಳುವ ವೇಳೆ ಚಿರತೆಗಳು ಕಾಣಿಸಿಕೊಂಡಿವೆ. ಹೀಗಾಗಿ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಚಿರತೆಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.








