ಚಿಕ್ಕಮಗಳೂರು : ಕೈ ಕಾರ್ಯಕರ್ತರಿಂದಲೇ ನಯನ ಮೋಟಮ್ಮ ಆಪ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು ಮನೆಗೆ ನುಗ್ಗಿ ಶಾಸಕಿ ನಯನ ಆಪ್ತ ಆದಿತ್ಯನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಯಿಲ್ ಸೇರಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.
ಆದಿತ್ಯ ಮಹಿಳೆಯರು ಸೇರಿ ಕಾಂಗ್ರೆಸ್ ಮುಖಂಡರಿಗೆ ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದ್ದು, ವಿಡಿಯೋ ಮತ್ತು ಆಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಆರೋಪ ಕೇಳಿ ಬಂದಿದೆ. ಯುವತಿಯ ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿರುವ ಆರೋಪ ಕೇಳಿ ಬಂದಿದ್ದು ಮಹಿಳೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಪೊಲೀಸರು ತುಮಕೂರಿನಲ್ಲಿ ಆದಿತ್ಯನನ್ನು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.








