ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಗೊಳಿಸುವ ಸಂಬಂಧ ನೂತನ ಕಾಯ್ದೆ ಜಾರಿಗೆ ಸರ್ಕಾರದ ಮುಂದಾಗಿದ್ದು, ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು.
ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು.
ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳ ಮಾತುಗಳು:
• ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ… pic.twitter.com/L2OqKbC5GZ— CM of Karnataka (@CMofKarnataka) October 29, 2025








