ಬೆಂಗಳೂರು : ಪೋಷಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 984 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಕನ್ನಡ ಹಾಗೂ ಇತರ ಮಾಧ್ಯಮ ಬೋಧಿಸುತ್ತಿರುವ 984 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಆರಂಭಿಸುವುದಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಹಾಗೂ ಶಾಲೆಯಲ್ಲಿ ಇಎಂಟಿಐಪಿ ತರಬೇತಿ ಪಡೆದ ಶಿಕ್ಷಕರು ಲಭ್ಯವಿದ್ದಲ್ಲಿ ಅಂತಹ ಶಿಕ್ಷಕರೇ ಆಂಗ್ಲಮಾಧ್ಯಮ ಬೋಧಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಎಲ್ಲ ಇಲಾಖಾ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರಿಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.








