Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ: 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ
KARNATAKA

ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ: 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ

By kannadanewsnow0930/10/2025 4:02 PM

ಹೊಸಕೋಟೆ : ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗುರುವಾರ ಚಾಲನೆ ನೀಡಿದರು.

ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ಅವರೊಂದಿಗೆ ಸೌರ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, “ಈ ಘಟಕದಲ್ಲಿ 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಆಗಲಿದ್ದು, ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಮುಗಬಾಳ ಗ್ರಾಮ ಪಂಚಾಯ್ತಿಯ ಒಟ್ಟು 33 ಗ್ರಾಮಗಳ 1383 ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ,”ಎಂದರು.

“ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗುವ ಫೀಡರ್‌ ಮಟ್ಟದ ಸೌರೀಕರಣ ಯೋಜನೆಯಾದ ‘ಕುಸುಮ್‌- ಸಿ’ಗೆ ವೇಗ ನೀಡಿ, ಶಕ್ತಿ ತುಂಬಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ. ಈ ಯೋಜನೆಯಿಂದ ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್‌ ನೀಡಲು ಸಾಧ್ಯವಾಗಲಿದೆ.ಯಲಚಹಳ್ಳಿಯ ಈ ಸೌರ ಘಟಕದಿಂದ ಒಟ್ಟು 4 ಕೃಷಿ ಫೀಡರ್‌ಗಳು ಸೋಲಾರ್‌ ವಿದ್ಯುತ್‌ ವಿತರಣೆ ಜಾಲವಾಗಿ ಬದಲಾಗಲಿದೆ,” ಎಂದರು.

“ಕುಸುಮ್-ಸಿ ಯೋಜನೆ ರೈತರಿಗೆ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನ ಗೇಟ್‌ವೇ ಎನಿಸಿಕೊಂಡಿರುವ ಹೊಸಕೋಟೆ ಗ್ರಾಮೀಣ ಭಾಗದ ರೈತರಿಗೆ ವರದಾನವಾಗಿದೆ. ಯೋಜನೆ ಜಾರಿಗೊಳಿಸಲು ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತಿದೆ. ಸ್ಥಳೀಯ ಶಾಸಕರಾದ ಶರತ್‌ ಬಚ್ಚೇಗೌಡ ಅವರು ಆಸಕ್ತಿ ವಹಿಸಿ ಯೋಜನೆ ಅನುಷ್ಠಾನಕ್ಕೆ ನೆರವಾಗಿದ್ದಾರೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ,” ಎಂದರು.

“ಸರ್ಕಾರಿ ಭೂಮಿ ಲಭ್ಯವಿರದ ಸ್ಥಳಗಳಲ್ಲಿ ರೈತರೇ ಭೂಮಿಯನ್ನು ಗುತ್ತಿಗೆ ನೀಡುವ ಮೂಲಕ ವಾರ್ಷಿಕ ಆದಾಯಗಳಿಸಬಹುದಾಗಿದೆ. ಹಾಗಾಗಿ, ರೈತರು ಭೂಮಿ ನೀಡಲು ಮುಂದೆ ಬರಬೇಕು. ಕುಸುಮ್‌ ಸಿ ಯೋಜನೆಯಡಿ ಪ್ರತಿ ಎಕರೆ ಭೂಮಿಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ನವೀಕರಿಸಬಹುದಾದ ಇಂಧನ ಸೇವಾ ಕಂಪನಿಯ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ,” ಎಂದು ಹೇಳಿದರು.

“ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪಕೇಂದ್ರಗಳ ಬಳಿ ಸೌರ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್‌ಗಳ ವ್ಯಾಪ್ತಿಯ ಕೃಷಿ ಪಂಪ್‌ಸೆಟ್‌ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲೇ ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ,” ಎಂದು ಸಚಿವರು ಹೇಳಿದರು.

“ಕುಸುಮ್‌-ಸಿ ಜತೆಗೆ ಪಂಪ್‌ಸೆಟ್‌ಗೆ ಅಗತ್ಯ ಇರುವ ವಿದ್ಯುತ್ತನ್ನು ಜಮೀನಿನಲ್ಲೇ ಉತ್ಪಾದಿಸಲು ನೆರವಾಗುವ ಪಿಎಂ ಕುಸುಮ್-ಬಿ ಯೋಜನೆಯ ಲಾಭವನ್ನು ರೈತರು ಪಡೆಯಬೇಕು. ಕೇಂದ್ರ ಸರ್ಕಾರವು ಯೋಜನೆಗೆ ಶೇ.30ರಷ್ಟು ಸಹಾಯಧನ ಒದಗಿಸಿದರೆ, ರಾಜ್ಯ ಸರ್ಕಾರವು ಶೇ.50ರಷ್ಟು ಸಬ್ಸಿಡಿ ನೀಡುತ್ತಿದೆ.ಫಲಾನುಭವಿಗಳು ಶೇ.20ರಷ್ಟನ್ನು ಭರಿಸಿದರೆ ಸಾಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದು,”ಎಂದರು.

120 ಹೊಸ ಸಬ್‌ಸ್ಟೇಷನ್‌

“ನಮ್ಮ ಸರ್ಕಾರ ಬಂದ ಸಂದರ್ಭದಲ್ಲಿ 8-9 ಸಾವಿರ ಮೆಗಾ ವ್ಯಾಟ್‌ನಷ್ಟಿದ್ದ ವಿದ್ಯುತ್‌ ಬೇಡಿಕೆ ಏಕಾಏಕಿ 18 ಸಾವಿರ ಮೆಗಾವ್ಯಾಟ್‌ಗೆ ಏರಿತು. ಆಗ ಅನ್ಯ ರಾಜ್ಯಗಳೊಂದಿಗೆ ವಿದ್ಯುತ್‌ ವಿನಿಮಯ ಒಪ್ಪಂದ ಮಾಡಿಕೊಂಡು ಜನರಿಗೆ ತೊಂದರೆ ಆಗದಂತೆ ನೋಡಿಕೊಂಡೆವು. ನಂತರದ ದಿನಗಳಲ್ಲಿ ಹಲವಾರು ಹೊಸ ಯೋಜನೆಗಳನ್ನು ಕೈಗೆತ್ತಿಕೊಂಡು ವಿದ್ಯುತ್‌ ಉತ್ಪಾದನೆ ಹೆಚ್ಚಿಸಲಾಗಿದೆ. ಸದ್ಯ ವಿದ್ಯುತ್‌ ಕೊರತೆ ಇಲ್ಲ. ಆದರೆ, ಲೋಡ್‌ ಹೆಚ್ಚಳವಾಗಿ ಪೂರೈಕೆಯಲ್ಲಿ ಸಮಸ್ಯೆ ಆಗುತ್ತದೆ. ಇದನ್ನು ಸರಿಪಡಿಸುವ ಉದ್ದೇಶದಿಂದ 120 ಹೊಸ ಸಬ್‌ಸ್ಟೇಷನ್‌ಗಳನ್ನು ನಿರ್ಮಿಸಲಾಗುವುದು,” ಎಂದು ವಿವರಿಸಿದರು.

ಶಾಲಾ ಕಟ್ಟಡದ ಶಂಕು ಸ್ಥಾಪನೆ

ಇದೇ ವೇಳೆ ಸಚಿವ ಕೆ.ಜೆ.ಜಾರ್ಜ್ ಅವರು ವೋಲ್ವೊದ ಸಿಎಸ್‌ಆರ್‌ ನಿಧಿಯಡಿ 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ತಾವರೆಕೆರೆಯ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಕಿಯೋನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

Share. Facebook Twitter LinkedIn WhatsApp Email

Related Posts

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM1 Min Read

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM2 Mins Read

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM1 Min Read
Recent News

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM

ಸಾವಕಾಶವಾಗಿ ಉಣ್ಣುವ ಅಭ್ಯಾಸದಿಂದ ಸಿಗಲಿದೆ 5 ಪ್ರಮುಖ ಪ್ರಯೋಜನಗಳು | Slow eating benefits

14/04/2026 9:01 PM
State News
KARNATAKA

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

By kannadanewsnow0914/04/2026 10:15 PM KARNATAKA 1 Min Read

ಶಿವಮೊಗ್ಗ: ವಿಶ್ವದ ಶ್ರೇಷ್ಠ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ಒಂದು ವರ್ಗಕ್ಕೆ ಅಥವಾ ಸಮಾಜಕ್ಕೆ ಸೀಮಿತಗೊಳಿಸಿ…

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು

14/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.