ಉತ್ತರಕನ್ನಡ : ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಇದೀಗ ಐದು ಸರ್ಕಾರಿ ಕಚೇರಿಗಳ ಪವರ್ ಕಟ್ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಐದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಹಶೀಲ್ದಾರ್ ಕಚೇರಿ, ಉಪನೊಂದಣಾಧಿಕಾರಿ ಕಚೇರಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರ ಕಚೇರಿ, ಎಸಿ ಕಚೇರಿ ಹಾಗೂ ಕಾರವಾರದ ಎಂಎಲ್ಎ ಕಟ್ಟಡಕ್ಕೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಇದೀಗ ಈ ಒಂದು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಕಚೇರಿಗಳ ಪವರ್ ಕಟ್ ಮಾಡಿ ಹೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.








