ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುಕ್ರವಾರಕ್ಕೆ ಅಂತ್ಯವಾಗಲಿದೆ. ಯಾವುದೇ ಕಾರಣಕ್ಕೂ ಅವಧಿ ಮುಂದುವರಿಸುವ ನಿರ್ಧಾರ ಆಗಿಲ್ಲ. ಆನ್‌ಲೈನ್‌ನಲ್ಲಿ ಮಾಹಿತಿ ನೀಡುವವರಿಗೆ ನವೆಂಬರ್ 10ರ ವರೆಗೆ ಅವಕಾಶ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುರುವಾರದ ಅಂತ್ಯಕ್ಕೆ ರಾಜ್ಯದಲ್ಲಿ (ಬೆಂಗಳೂರು ನಗರ ಹೊರತುಪಡಿಸಿ) 1,46,53,638 ಮನೆಗಳು ಮತ್ತು 5,52,57,205 ಜನರ ಅಂದರೇ ಶೇ.101.47 ಸಮೀಕ್ಷೆ ಮುಗಿದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಶೇ.48.32 ಸಮೀಕ್ಷೆ ಮುಗಿದೆ. ಇದಕ್ಕೆ ಕೆಲವು ತಾಂತ್ರಿಕ ಕಾರಣಗಳು ಕಂಡುಬಂದಿದೆ. ಬೆಂಗಳೂರಿನಲ್ಲಿ ವಾಸವಾಗಿರುವರು ಬಹುತೇಕರು ಹೊರ ಜಿಲ್ಲೆಯಿಂದ ಬಂದವರು ಇರುತ್ತಾರೆ. ಸ್ವಂತ ಊರಿನಲ್ಲಿ ಮಾಹಿತಿ ಕೊಟ್ಟಿದ್ದು, ಬಾಡಿಗೆ ಮನೆಯಲ್ಲಿ ಕೊಡಲು ನಿರಾಕರಿಸಿರುವುದು ಕಂಡು ಬಂದಿದೆ ಎಂದರು.
ಅಲ್ಲದೆ, ವಿದ್ಯುತ್ ಮೀಟರ್‌ಗಳು ಸಹ ಹೆಚ್ಚಿಗೆ ಇರುವ ಪರಿಣಾಮ ಶೇಕಡಾವಾರು ಪ್ರಮಾಣ ಕಡಿಮೆ ತೋರಿಸುತ್ತಿದೆ. ಯಾಕೇ ಸಮೀಕ್ಷೆ ಕಡಿಮೆಯಾಗಿದೆ ಎಂಬದುರ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಶುಕ್ರವಾರ ಹೆಚ್ಚಿನ ಮಾಹಿತಿ ನೀಡುವುದಾಗಿ ಶಿವರಾಜ ಎಸ್. ತಂಗಡಗಿ ಮಾಹಿತಿ ನೀಡಿದರು.
KSHCOEA BMS ಸಂಘದ ಹೋರಾಟದ ಫಲ: ಮೃತ ‘NHM ಸಿಬ್ಬಂದಿ’ ಕುಟುಂಬಕ್ಕೆ 10 ಲಕ್ಷ ವಿಮೆ ಚೆಕ್ ಹಸ್ತಾಂತರ
BREAKING: CBSEಯಿಂದ 10, 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ 2026ರ ಅಂತಿಮ ದಿನಾಂಕ ಬಿಡುಗಡೆ
ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ








