ಶಿವಮೊಗ್ಗ : ಮಕ್ಕಳ ಜಗಳವನ್ನು ಬಿಡಿಸಲು ಹೋಗಿ ಅಂಗನವಾಡಿ ಸಹಾಯಕಿ ಒಬ್ಬಳು ಬೆಂಕಿಯಲ್ಲಿ ಕಾಸಿದ ಚಾಕುವಿ ನಿಂದ ಮಗುವಿನ ಗಲ್ಲಕ್ಕೆ ಎಳೆದಿದ್ದಾರೆ.ಹೌದು ಮಕ್ಕಳ ಜಗಳ ಬಿಡಿಸಲು ಅಂಗನವಾಡಿ ಸಹಾಯಕಿಯೊಬ್ಬಳು ಬೆಂಕಿಯಲ್ಲಿ ಕಾಸಿದ ಚಾಕುವಿ ನಿಂದ ಮಗುವಿನ ಗಲ್ಲಕ್ಕೆ ಬರೆ ಎಳೆದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಚಿಕ್ಕಸವಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಚಿಕ್ಕಸವಿ ಗ್ರಾಮದ ಚಂದ್ರಪ್ಪ ಮತ್ತು ನಂದಿನಿ ದಂಪತಿಯ ಮೂರುವರೆ ವರ್ಷದ ಮಗು ಯೋಧ ಮೂರ್ತಿ, ಬರೆಗೆ ತುತ್ತಾದ ಮಗು. ಚಿಕ್ಕಸವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 10 ಮಕ್ಕಳಿದ್ದಾರೆ. ಗುರುವಾರ ಬೆಳಗ್ಗೆ ಎಂದಿನಂತೆ ಮಕ್ಕಳು ಹಾಜರಾಗಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಜಗಳವಾಡಿದ್ದಾರೆ. ಯೋಧಮೂರ್ತಿ ಇನ್ನೊಬ್ಬ ಮಗುವಿಗೆ ಕಚ್ಚಿದ್ದಾನೆ. ಪರಸ್ಪರ ಜಗಳವಾಡುತ್ತಿದ್ದ ಮಕ್ಕಳನ್ನು ಬಿಡಿಸಬಹುದಾಗಿತ್ತು.
ಆದರೆ ಅಂಗನವಾಡಿ ಸಹಾಯಕಿ ಹೇಮಮ್ಮ ಎಂಬುವರು ಚಾಕುವನ್ನು ಬೆಂಕಿಯಲ್ಲಿ ಕಾಸಿ ಯೋಧಮೂರ್ತಿಯ ಗಲ್ಲಕ್ಕೆ ಬರೆ ಎಳೆದಿದ್ದಾರೆ. ಬಿಸಿಯ ಉರಿಯಿಂದ ಅಳತೊಡಗಿದ ಮಗು ಅಸ್ವಸ್ಥಗೊಂಡಿದ್ದು, ಸೊರಬ ಸಾರ್ವಜನಿಕ ಆಸತ್ರೆಗೆ ದಾಖಲಿಸಲಾಗಿದೆ. ಮಗುವಿನ ಪೋಷಕರು ನೀಡಿದ ದೂರಿನನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಹೇಮಮ್ಮ ವಿರುದ್ಧ ದೂರು ದಾಖಲಾಗಿದೆ.
 
		



 




