ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ಎಂಟು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಕಾನನಕಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅತಿ ವೇಗದಲ್ಲಿ ಬಂದು ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ನೂರ್, ಶಮಿಉಲ್ಲಾ, ಗುರುರಾಜ್ ಮತ್ತು ಖಾದರ್ ಜಿಲಾನ್ ಸ್ಥಿತಿ ಗಂಭೀರವಾಗಿದ್ದು ಗಯಾಳುಗಳು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕಾರಿನಲ್ಲಿ ಯುವಕರು ಗಂಗಾವತಿಗೆ ತೆರಳುತ್ತಿದ್ದರು ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
		



 




