ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.1ರಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ.
ಈ ಕುರಿತಂತೆ ಬಿಎಂಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ ೭೦ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ.
ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪೀಕ್ ಅವಧಿಯಲ್ಲಿ ರೈಲುಗಳ ಆವರ್ತನವು ಪ್ರತಿ 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. (ಪ್ರಸಕ್ತ 19 ನಿಮಿಷಗಳ ಅಂತರದ ಬದಲಾಗಿ). ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆ.
ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಬದಲಾವಣೆಯನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆಯುವಂತೆ ವಿನಂತಿಸಿದೆ.
 
		



 




