ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ಸರ್ದಾರ್ ವಲ್ಲಭಭಾಯ್ ಪಟೇಲ್ರವರ ಜನ್ಮದಿನದ ಅಂಗವಾಗಿ ಇಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬೆಂಗಳೂರಿನ ಎಂ.ಜಿ. ರೈಲ್ವೆ ಕಾಲೋನಿಯಲ್ಲಿ ʼಏಕತೆಗಾಗಿ ಓಟʼ ವನ್ನು ಆಯೋಜಿಸಲಾಗಿತ್ತು. ಮೊದಲಿಗೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್ ರವರು ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು.
ನಂತರ ಆಶುತೋಷ್ ಕುಮಾರ್ ಸಿಂಗ್ ರವರ ನೇತೃತ್ವದಲ್ಲಿ ರೈಲ್ವೆ ಕ್ರೀಡಾ ಮೈದಾನದಿಂದ ಆರಂಭಗೊಂಡ ಏಕತೆಗಾಗಿ ಓಟವು ಎಂ.ಜಿ. ರೈಲ್ವೆ ಕಾಲೋನಿಯ ಮೂಲಕ ಸಾಗಿ ಮತ್ತೆ ರೈಲ್ವೆ ಕ್ರೀಡಾ ಮೈದಾನದಲ್ಲಿ ಮುಕ್ತಾಯಗೊಳಿಸಲಾಯಿತು.
ಈ ವೇಳೆ ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಗಳಾದ ಪರೀಕ್ಷಿತ್ ಮೋಹನ್ಪೂರಿಯಾ ಮತ್ತು ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಉಮಾ ಶರ್ಮಾ, ಹಿರಿಯ ವಿಭಾಗೀಯ ಭದ್ರತಾ ಆಯುಕ್ತ (ಆರ್.ಪಿ.ಎಫ್.) ಡಾ. ಶ್ರೇಯಾನ್ಸ್ ಚಿಂಚವಾಡೆ, ಇತರ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ, ಪಿ.ಎಂ. ಕೇಂದ್ರೀಯ ವಿದ್ಯಾಲಯ ಮತ್ತು ಶಾಮ ವಿದ್ಯಾ ಶಾಲಾ ದ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಈ ಏಕತೆಗಾಗಿ ಓಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಹರಡಿದರು.
‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ
BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ








