2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ನವೆಂಬರ್, 04 ರಿಂದ 10 ರವರೆಗೆ ಕೊಡಗು ಜಿಲ್ಲಾ ಮಟ್ಟದ ‘ಜಿಲ್ಲಾ ಕೋರಿಕೆ/ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಮುಖಾಂತರ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ.
ಅದರಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಜಿಲ್ಲಾ ಹಂತದ ಕೋರಿಕೆ / ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯು ಪ್ರಾಥಮಿಕ ಶಾಲಾ ವಿಭಾಗಕ್ಕೆ ನವೆಂಬರ್, 04 ರಿಂದ ನವೆಂಬರ್, 06 ರವರೆಗೆ ಹಾಗೂ ಪ್ರೌಢ ಶಾಲಾ ವಿಭಾಗಕ್ಕೆ ನವೆಂಬರ್, 07 ರಿಂದ 10 ರವರೆಗೆ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ನಡೆಯಲಿದೆ.
ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್‍ಗೆ ಸಮಯಕ್ಕೆ ಸರಿಯಾಗಿ ಸೂಕ್ತ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.








