ಕಲಬುರ್ಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೇ ರೈತನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೂಡುರು ಗ್ರಾಮದಲ್ಲಿ ಸಾಲದ ಬಾಧೆಯಿಂದಾಗಿ ರೈತ ಶಿವಾಜಿ ಜಾಗಿರದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಂಕ್ ಸೇರಿ ಹಲವೆಡೆ 15 ಲಕ್ಷ ಸಾಲವನ್ನು ರೈತ ಶಿವಾಜಿ ಮಾಡಿದ್ದರು. ಅತಿವೃಷ್ಟಿಯಿಂದ ಬೆಳೆ ಕೈಕೊಟ್ಟಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೂಡುರು ಗ್ರಾಮದ ಬಳಿಯಲ್ಲಿರುವಂತ ಜಮೀನಿನಲ್ಲಿ ರೈತನ ಶವ ಪತ್ತೆಯಾಗಿದೆ. ಈ ಸಂಬಂಧ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ನ.19 ರಂದು `ಅಕ್ಕ ಪಡೆ’ಗೆ ಚಾಲನೆ.!








