ನವದೆಹಲಿ : ತೆಲಂಗಾಣದಲ್ಲಿ ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮುಗುಚಿ 24 ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿ ತೀವ್ರ ದುಃಖಕರವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ…” ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.
ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾಂಡೂರು ಡಿಪೋಗೆ ಸೇರಿದ ಆರ್ ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್ ಚಾಲಕ ಸೇರಿ 24ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದ ವೇಳೆ ಬಸ್ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಜೆಸಿಬಿ ಸಹಾಯದಿಂದ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಈ ಅಪಘಾತದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಮತ್ತು ನೌಕರರು ಎಂದು ಪೊಲೀಸರು ಹೇಳುತ್ತಾರೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಪ್ರತಿದಿನ ಬೆಳಿಗ್ಗೆ ಹೈದರಾಬಾದ್ಗೆ ಹೋಗುತ್ತಾರೆ. ಭಾನುವಾರ ರಜೆ ಇದ್ದ ಕಾರಣ ಕೆಲವರು ತಮ್ಮ ಮನೆಗಳಿಗೆ ತೆರಳಿ ವಾಪಸ್ ಪ್ರಯಾಣ ಬೆಳೆಸಿದರು. ಈ ಅವಘಡದಿಂದಾಗಿ ಹೈದರಾಬಾದ್-ಬಿಜಾಪುರ ರಸ್ತೆಯಲ್ಲಿ ಭಾರಿ ಸಂಚಾರ ಅಸ್ತವ್ಯಸ್ತವಾಗಿತ್ತು.
PM Modi announces an ex-gratia of Rs. 2 lakh from PMNRF for the next of kin of each deceased and Rs. 50,000 for the injured in the road accident in Rangareddy district of Telangana.
PMO tweets, "The loss of lives due to a mishap in the Rangareddy district of Telangana is deeply… pic.twitter.com/HNfxlxesQ3
— ANI (@ANI) November 3, 2025








