ನವದೆಹಲಿ: ದೆಹಲಿಯಲ್ಲಿ ಹದಗೆಡುತ್ತಿರುವ ವಾಯು ಗುಣಮಟ್ಟದ ಬಗ್ಗೆ ವಾಯು ಗುಣಮಟ್ಟ ನಿರ್ವಹಣಾ ಆಯೋಗದಿಂದ (ಸಿಎಕ್ಯೂಎಂ) ಸ್ಥಿತಿಗತಿ ವರದಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೇಳಿದೆ
ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಹೆಚ್ಚಿನ ವಾಯು ಗುಣಮಟ್ಟ ಮೇಲ್ವಿಚಾರಣಾ ಕೇಂದ್ರಗಳು ಮುಚ್ಚಲ್ಪಟ್ಟಿವೆ ಎಂದು ತಿಳಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದೆ.
ದೆಹಲಿ ವಾಯುಮಾಲಿನ್ಯ ವಿಷಯದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲೆ ಅಪರಾಜಿತಾ ಸಿಂಗ್ ಅವರು ಸಿಎಕ್ಯೂಎಂನಿಂದ ವರದಿಯನ್ನು ಕೋರಿದ್ದಾರೆ.
“ಪ್ರಸ್ತುತ ವಾಯುಮಾಲಿನ್ಯ ಸ್ಥಿತಿಯ ಬಗ್ಗೆ ಸಿಎಕ್ಯೂಎಂನಿಂದ ವರದಿ ಬರಬೇಕಾಗಿದೆ. ದೆಹಲಿಯ 37 ಮೇಲ್ವಿಚಾರಣಾ ವ್ಯವಸ್ಥೆಗಳ ಪೈಕಿ ಕೇವಲ 9 ಮಾನಿಟರಿಂಗ್ ವ್ಯವಸ್ಥೆಗಳು ಮಾತ್ರ ದೀಪಾವಳಿಯ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಿನ್ಹಾ ಹೇಳಿದ್ದಾರೆ.
ನಂತರ ನ್ಯಾಯಾಲಯವು ಸಿಎಕ್ಯೂಎಂನಿಂದ ಸ್ಥಿತಿ ವರದಿಯನ್ನು ಕೇಳಿತು.
ಸಿಜೆಐ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್
ಇತ್ತೀಚಿನ ದೀಪಾವಳಿ ಆಚರಣೆಯ ಒಂದು ದಿನದ ನಂತರ, ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ತೀವ್ರವಾಗಿ ಹದಗೆಟ್ಟಿದೆ.
ಮಾಧ್ಯಮ ವರದಿಗಳ ಪ್ರಕಾರ, ದೆಹಲಿ ಸರ್ಕಾರವು ವಾಯು ಗುಣಮಟ್ಟ ಮಾನಿಟರಿಂಗ್ ಕೇಂದ್ರಗಳ ಸುತ್ತಲೂ ನೀರನ್ನು ಸಿಂಪಡಿಸಲು ಟ್ಯಾಂಕರ್ ಗಳನ್ನು ನಿಯೋಜಿಸಿದೆ. ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ರೀಡಿಂಗ್ ಗಳನ್ನು ತಿರುಚಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಗಳು ಆರೋಪಿಸಿವೆ.
ಸುಪ್ರೀಂಕೋರ್ಟ್ ಈ ಹಿಂದೆ ಹಸಿರು ಪಟಾಕಿಗಳನ್ನು ಸುಡಲು ಅನುಮತಿ ನೀಡಿತ್ತು
		







