ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಎಚ್ ವೈ ಮೇಟಿ (79) ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ ವೈ ಮೇಟಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
ರಾಜಕೀಯದಲ್ಲಿ ನಡೆದುಬಂದ ಹಾದಿ
ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು , 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ , ಮೇಟಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು, 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಅವರು ಬಿಜೆಪಿಯ ವೀರಭದ್ರಯ್ಯ ಚರಂತಿಮಠ ವಿರುದ್ಧ 15,934 ಮತಗಳ ಅಂತರದಿಂದ ಸೋತರು. ಅದಕ್ಕೂ ಮೊದಲು, ಅವರು 1989 ರಿಂದ 1999 ರವರೆಗೆ ಮತ್ತು 2004 ರಿಂದ 2007 ರವರೆಗೆ ಗುಳೇದಗುಡ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು








