ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಹಾಡಹಗಲೇ ಚಾಕುವಿನಿಂದ ಕತ್ತು ಕೊಯ್ದು ಪ್ರಾವಿಜನ್ ಸ್ಟೋರ್ ಮಾಲೀಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ.
ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಈ ಒಂದು ಕೊಲೆ ನಡೆದಿದ್ದು, ಪ್ರಾವಿಜನ್ ಸ್ಟೋರ್ ಇಟ್ಟುಕೊಂಡಿದ ಮಾಲೀಕ ಮಾದೇಶ್ (40) ನನ್ನು ಬೀಕರವಾಗಿ ಕೊಲೆ ಮಾಡಲಾಗಿದೆ. ಗನ್, ಚಾಕು ಸಮೇತ ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆ ಮಾಡಿದ್ದಾರೆ. ಬೈಕ್ ನಲ್ಲಿ ಗನ್ ಮತ್ತು ಚಾಕು ಸಮೇತವಾಗಿ ಮನೆಗೆ ಹಂತಕರು ಎಂಟ್ರಿ ಕೊಟ್ಟಿದ್ದಾರೆ. ಚಾಕುವಿನಿಂದ ಇರಿದು ಮಾದೇಶನನ್ನ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪಡಿಸಲು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








