ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸುದ್ದು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. MDMA ಮತ್ತು ಇತರೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಮಾರು 75 ಲಕ್ಷ ಮೌಲ್ಯದ 752 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮಲ್ಲೇಶ್ವರಂ ಪೊಲೀಸ್ರು ಸಹ ಗಾಂಜಾ ಮಾರುತಿದೆ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಬಂಧಿತರಿಂದ 80,000 ಮೌಲ್ಯದ 885 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ರೈಲ್ವೆ ಬಳಿ ಮೆಟ್ಟಿಲುಗಳ ಮೇಲೆ ಗಾಂಜಾ ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಮತ್ತೊಂದು ಪ್ರಕರಣದಲ್ಲಿ ವೀಡ್ ಆಯಿಲ್ ಮಾರುತಿದವನು ಅರೆಸ್ಟ್ ಮಾಡಿದ್ದಾರೆ.








