ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 31 ಮಂದಿ ಉಪ ಪೊಲೀಸ್ ವರಿಷ್ಠಾಧಿಕಾರಿಗಳನ್ನು (ಡಿವೈಎಸ್ಪಿ-ಸಿವಿಲ್), ಹಾಗೂ ಮೂವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಸೇವಾ ಹಿತದೃಷ್ಟಿಯಿಂದ ಈ ವರ್ಗಾವಣೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೈಗೊಳ್ಳಲಾಗಿದ್ದು, 31 ಮಂದಿ ಸಿವಿಲ್ ಡಿವೈಎಸ್ಪಿ ಅಧಿಕಾರಿಗಳಿಗೆ ಹೊಸ ಕರ್ತವ್ಯ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಪ್ರಮುಖವಾಗಿ, ವರ್ಗಾವಣೆಗೊಂಡಿರುವ ಕೆಲವು ಅಧಿಕಾರಿಗಳನ್ನು ಲೋಕಾಯುಕ್ತ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಸ್ಥಳ ನಿಯುಕ್ತಿ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ವರ್ಗಾವಣೆಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ಮಾಡಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.









