ಬೆಂಗಳೂರು : ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.
ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ ಪಾಟೀಲ್, ಹೂಡಿಕೆ ಆಕರ್ಷಣೆ, ಉದ್ಯಮ ವಿಸ್ತರಣೆಯ ಗುರಿ ಇರಿಸಿಕೊಂಡು ಕೈಗಾರಿಕಾ ಇಲಾಖೆಯ ಉನ್ನತಮಟ್ಟದ ನಿಯೋಗದೊಂದಿಗೆ ಈ ದಿನ ಪುಣೆಯಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿಸ್ ಪ್ರಮುಖರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಸಂಸ್ಥೆಯು ಮುಂದಿನ 3 ವರ್ಷಗಳಲ್ಲಿ ಉಕ್ಕು ತಯಾರಿಕೆಯನ್ನು ವಿಸ್ತರಿಸಲು, ಕಬ್ಬಿಣದ ಅದಿರು ಸಂಸ್ಕರಣೆಯನ್ನು ಹೆಚ್ಚಿಸಲು ಮತ್ತು ಸ್ಪಾಂಜ್ ಪೈಪ್ ಉತ್ಪಾದನೆಗಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸ್ಥಾವರವನ್ನು ಅಭಿವೃದ್ಧಿಪಡಿಸಲು ₹3,000 ಕೋಟಿ ಹೂಡಿಕೆ ಮಾಡಲಿದೆ.
ತನ್ನ ಸಂಸ್ಥೆಯಲ್ಲಿ ಶೇ. 99 ರಷ್ಟು ಕನ್ನಡಿಗರಿಗೆ ಮೀಸಲಿಡುವುದಾಗಿ ತಿಳಿಸಿದ್ದು ಸಂತಸ ತರಿಸಿದೆ.
ಕಳೆದ ಎರಡು ದಶಕಗಳಿಂದ ಸಂಸ್ಥೆ ತನ್ನ ಲಾಭದ ಶೇ. 2ರಷ್ಟು ಅಂಶವನ್ನು ಸಿಎಸ್ಆರ್ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಆರೋಗ್ಯ ಮತ್ತು ಜನಕಲ್ಯಾಣದ ಕ್ಷೇತ್ರದಲ್ಲಿ ಹೆಚ್ಚಿನ ಒತ್ತು ನೀಡಲಿರುವುದು ಶ್ಲಾಘನೀಯ.
ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ ಉನ್ನತ ಮಟ್ಟದ ನಿಯೋಗದೊಂದಿಗೆ ರೋಡ್ ಶೋ ನಡೆಸಿದ ಅವರು, ಹೂಡಿಕೆ ಕುರಿತು ಹತ್ತಕ್ಕೂ ಹೆಚ್ಚು ಉದ್ಯಮಿಗಳನ್ನು ಭೇಟಿಯಾಗಿ, ಮಾತುಕತೆ ನಡೆಸಿದರು. ಜೊತೆಗೆ ವಿಪ್ರೋ ಪ್ಯಾರಿ, ಅಟ್ಲಾಸ್ ಕಾಪ್ಕೋ, ಬೆಲ್ ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಮತ್ತು ಫ್ಲೂಯಿಡ್ ಕಂಟ್ರೋಲ್ಸ್ ಲಿಮಿಟೆಡ್ ಉದ್ಯಮಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿಸಿವೆ. ಬಂಡವಾಳ ತೊಡಗಿಸಲು ಮುಂದಾಗಿರುವ ಈ ಕಂಪನಿಗಳಿಗೆ ಭೂಮಿ, ಮೂಲಸೌಕರ್ಯ ಮುಂತಾದ ಅನುಕೂಲಗಳ ಜೊತೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಹಿರಿಯೂರಿನಲ್ಲಿ ತನ್ನ ಘಟಕ ಹೊಂದಿರುವ ಕಿರ್ಲೋಸ್ಕರ್ ಫೆರೋಸ್, ಅದನ್ನು ಮೇಲ್ದರ್ಜೆಗೇರಿಸಲು ಮುಂದಾಗಿದ್ದು, ಇಲ್ಲಿ ಸ್ಪಾಂಜ್ ಪೈಪ್ ಉತ್ಪಾದನೆ ಆರಂಭಿಸಲಿದೆ. ಜೊತೆಗೆ ತನ್ನ ಉಕ್ಕು ಉತ್ಪಾದನೆ ಘಟಕದ ಸಾಮರ್ಥ್ಯ ಹೆಚ್ಚಳ, ಕಬ್ಬಿಣದ ಅದಿರು ಸಂಸ್ಕರಣೆ ಹೆಚ್ಚಳ, ಫೌಂಡ್ರಿ ಘಟಕದ ಅಭಿವೃದ್ಧಿ ಮುಂತಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ ಎಂದಿದ್ದಾರೆ.
ಈ ಕಂಪನಿಯ ಉದ್ಯೋಗಿಗಳಲ್ಲಿ ಶೇ.99ರಷ್ಟು ಕನ್ನಡಿಗರೇ ಇದ್ದಾರೆ. ಇದರಿಂದ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನೂ ಒಳಗೊಂಡ ಪ್ರಗತಿ ಸಾಧ್ಯವಾಗಲಿದೆ. ಕಿರ್ಲೋಸ್ಕರ್ ಕಂಪನಿಯು 20 ವರ್ಷಗಳಿಂದಲೂ ತನ್ನ ಆದಾಯದಲ್ಲಿ ಶೇ.2ರಷ್ಟು ಲಾಭಾಂಶವನ್ನು ಸಿಎಸ್ಆರ್ ನಿಧಿಗೆ ಕೊಡುತ್ತಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿ ಇದೆ ಎಂದು ತಿಳಿಸಿದ್ದಾರೆ.
ಹಿರಿಯೂರು ಸ್ಥಾವರ ಅಭಿವೃದ್ಧಿಗೆ ರೂ. 3,000 ಕೋಟಿ ಹೂಡಿಕೆ ಪ್ರಕಟಿಸಿದ ಕಿರ್ಲೋಸ್ಕರ್ ಫೆರಸ್!
ಶೇ. 99 ಕನ್ನಡಿಗರಿಗೆ ಉದ್ಯೋಗ ಮೀಸಲು!ಹೂಡಿಕೆ ಆಕರ್ಷಣೆ, ಉದ್ಯಮ ವಿಸ್ತರಣೆಯ ಗುರಿ ಇರಿಸಿಕೊಂಡು ಕೈಗಾರಿಕಾ ಇಲಾಖೆಯ ಉನ್ನತಮಟ್ಟದ ನಿಯೋಗದೊಂದಿಗೆ ಈ ದಿನ ಪುಣೆಯಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿಸ್… pic.twitter.com/InwD5Tiu8O
— M B Patil (@MBPatil) November 4, 2025








