ಬಳ್ಳಾರಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ನಡೆಯಲಿದೆ.
ಈ ರ‍್ಯಾಲಿಗೆ ಜೂ. 30 ರಿಂದ ಜು.10 ರವೆರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುಗಾಗಿದ್ದು, ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್‌ಸೈಟ್‌ನಲ್ಲಿ ವಿಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ(ಪ್ರ) ಡಾ.ಸಿ.ಎ. ಹಿರೇಮಠಪ್ರಕಟಣೆಯಲ್ಲಿ ತಿಳಿಸಿದ್ದಾರೆ.








