ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಆಯತಪ್ಪಿ ನಿರ್ಮಾಣ ಹಂತದ ಕಟ್ಟಡದಲ್ಲಿ ನಿರ್ಮಿಸಿದ್ದ ತೊಟ್ಟಿಯಲ್ಲಿ ಬಿದ್ದು ಅವಾಜ್ ಖಾನ್ ಎಂಬ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಫುಟ್ ವೇರ್ ಅಂಗಡಿ ಮಾಲೀಕ ಅಫ್ತಾಜ್ ತಮ್ಮ ಪುತ್ರ ಅವಾಜ್ ಖಾನ್ ನನ್ನು ಕರೆದುಕೊಂಡು ಅಂಗಡಿಗೆ ಬಂದಿದ್ದರು. ಮೂತ್ರ ವಿಸರ್ಜನೆಗೆಂದು ಬಾಲಕ ಅಂಗಡಿ ಪಕ್ಕದ ನಿರ್ಮಾಣ ಹಂತದ ಕಟ್ಟಡದೊಳಗೆ ಹೋಗಿದ್ದಾನೆ. ಬಾಲಕ ಎಲ್ಲೂ ಪತ್ತೆಯಾಗದ ಹಿನ್ನೆಲೆ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದು, ನಂತರ ನೀರಿನ ತೊಟ್ಟಿಯಲ್ಲಿ ಬಾಲಕನ ಚಪ್ಪಲಿ ತೇಲುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








