ಶಿವಮೊಗ್ಗ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಎಸ್ಆರ್ಟಿಸಿ ಡಿಪೋದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸಂದೀಪ್ (41) ಮೃತ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ. ಸಂದೀಪ್ ಸಾಗರದ ಮಾರಿಕಾಂಬ ದೇವಾಲಯದ ಹಿಂಭಾಗದ ರಸ್ತೆಯ ನಿವಾಸಿಯಾಗಿದ್ದಾರೆ. ಸಂದೀಪ್ ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್ರನ್ನು ಸಹೋದ್ಯೋಗಿಗಳು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ.
ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂದೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಇನ್ನು KSRTC ಭದ್ರತಾ ಸಿಬ್ಬಂದಿ ಸಂದೀಪ್ ಹೃದಯಘಾತದಿಂದ ಸಾವನ್ನಪ್ಪಿರುವ ವಿಚಾರ ತಿಳಿದು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕೆಎಸ್ಆರ್ಟಿಸಿ ಸಿಬ್ಬಂದಿ ಸಂದೀಪ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.








