ತುಮಕೂರು: ರಾಜ್ಯದ ಕುರಿ ಹಾಗೂ ಮೇಕೆ ಸಾಕಾಣಿಕೆದಾರರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಅದೇ ಕುರಿ, ಮೇಕೆ ಮಾಂಸ ಸಂಸ್ಕರಣೆ ಮಾಡುವ ಆಧುನಿಕ ವಧಾಗಾರವನ್ನು ಈ ತಿಂಗಳ ಅಂತ್ಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ 20 ಎಕರೆ ಜಮೀನಿನಲ್ಲಿ 45 ಕೋಟಿ ರೂ ವೆಚ್ಚದಲ್ಲಿ ಕುರಿ ಹಾಗೂ ಮೇಕೆ ಮಾಂಸ ಸಂಸ್ಕರಣೆ ಆಧುನಿಕ ವಧಾಗಾರವನ್ನು ನಿರ್ಮಾಣ ಮಾಡಲಾಗಿದೆ.
ನವೆಂಬರ್ ತಿಂಗಳ ಅಂತ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಧುನಿಕ ವಧಾಗಾರ ಉದ್ಘಾಟನೆ ಮಾಡಲಿದ್ದಾರೆ. ಆಧುನಿಕ ವಧಾಗಾರ ಉದ್ಘಾಟನೆಗೆ ಸಂಬಂಧಿಸಿದಂತೆ ವಿಕಾಸ ಸೌಧದಲ್ಲಿ ಪಶುಸಂಗೋಪನೆ ಹಾಗೂ ರೇಷ್ಮೆ ಖಾತೆ ಸಚಿವ ವೆಂಕಟೇಶ್ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರ ನೇತ್ರತ್ವದಲ್ಲಿ ಸಭೆ ನಡೆಯಿತು.
ಈ. ಸಭೆಯಲ್ಲಿಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಪಶು ಸಂಗೋಪನೆ ಇಲಾಖೆ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ಸೇರಿದಂತೆ ಇದಕ್ಕೆ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಶಿರಾ ಮಧುಗಿರಿ ಕೊರಟಗೆರೆ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಕುರಿ ಹಾಗೂ ಮೇಕೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾಕಾಣೆ ಮಾಡಲಾಗುತ್ತಿದೆ. ಹೀಗಾಗಿ ಶಿರಾದಲ್ಲಿ ಕುರಿ ಹಾಗೂ ಮೇಕೆ ಮಾಂಸ ಸಂಸ್ಕರಣೆ ಘಟಕವನ್ನ ಸ್ಥಾಪಿಸಲಾಗಿದ್ದು ರೈತರಿಗೆ ಅನುಕೂಲ ಮಾಡಿಕೊಡುವುದು ಹಾಗೂ ಗ್ರಾಹಕರಿಗೆ ಶುದ್ಧ ಮಾಂಸವನ್ನು ನೀಡುವುದು ಇದರ ಉದ್ದೇಶವಾಗಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಇದೇ ವೇಳೆ ತಿಳಿಸಿದರು.
ಬಹಳ ವರ್ಷಗಳಿಂದ ಈ ಆಧುನಿಕ ವಧಾಗಾರ ಘಟಕದ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿತ್ತು . ಇದೀಗ ಎಲ್ಲ ಸಮಸ್ಯೆಗಳನ್ನು ಹಾಗೂ ಅಡೆತಡೆಗಳನ್ನು ಬಗೆಹರಿಸಿ ಇದೇ ತಿಂಗಳ ಅಂತ್ಯಕ್ಕೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿಸಿ ರೈತರಿಗೆ ಹಾಗೂ ಗ್ರಾಹಕರಿಗೆ ಸಮರ್ಪಿಸುವುದಾಗಿ ತಿಳಿಸಿದರು.
BIG NEWS: ಕುಡಿದು ಬರುತ್ತಿದ್ದ ಡ್ರೈವರ್‌ಗಳಿಗೆ ಲಂಚ ಪಡೆದು ಡ್ಯೂಟಿ: BMTC ಡಿಪೋ ಮ್ಯಾನೇಜರ್ ಸೇರಿ 9 ಮಂದಿ ಸಸ್ಪೆಂಡ್
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ








